ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಾಳಿನ ಸಂಪುಟ ಸಭೆಯಲ್ಲಿ ಅನುಮತಿ ವಿರೋಧಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ಈ ವೇಳೆ ಸಂಪುಟ ಸಭೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತರ ಕೈಗೊಳ್ಳುವ ಸಾಧ್ಯತೆ ಇದೆ. ದ್ವಂದ್ವ ಉಂಟಾಗಬಾರದು ಎಂದು ಅವರು ಸಭೆಯಿಂದ ದೂರ ಉಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಲಹೆ ನೀಡಿದೆ ಎಂದು ಹೇಳಲಾಗಿದೆ.
ನಾಳಿನ ಸಂಪುಟ ಸಭೆಯಲ್ಲಿ ವಿಚಾರಣೆಗೆ ಅನುಮತಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸಭೆಯಿಂದ ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಇದೆ.