ಬೆಂಗಳೂರು: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಗದ್ದಲ ಜೋರಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ.
ವಿಧಾನಸೌಧದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬಗ್ಗೆ ಚರ್ಚೆ ನಡೆಸಲಾಗುವುದು. ವಿವಿಧ ಜಿಲ್ಲೆಗಳ ಪರಿಸ್ಥಿತಿ ಕುರಿತಾಗಿ ಸಚಿವರೊಂದಿಗೆ ಮುಖ್ಯಮಂತ್ರಿಗಳ ಚರ್ಚೆ ನಡೆಸಲಿದ್ದಾರೆ.
ಈಗಾಗಲೇ ವಿವಿಧ ಜಿಲ್ಲೆಗಳ ಮಾಹಿತಿಯನ್ನು ಸಿಎಂ ಸಂಗ್ರಹಿಸಿದ್ದಾರೆ. ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಸಿಎಂ ಇಂದು ಸಚಿವರೊಂದಿಗೆ ಚರ್ಚೆ ನಡೆಸಲಿದ್ದು, ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.