ಬೆಂಗಳೂರು: ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್ ನಿಂದ ಡಿವೈಎಸ್ಪಿ ವರೆಗಿನ ನೇಮಕಾತಿಯಲ್ಲಿ ಕ್ರೀಡಾಕೂಟದ ಮೀಸಲಾತಿ ಪ್ರಮಾಣವನ್ನು ಶೇ. 2ರಿಂದ 3ಕ್ಕೆ ಹೆಚ್ಚಳ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪೊಲೀಸ್ ಕ್ರೀಡಾ ಮಿಸಲಾತಿಯನ್ನು ಶೇಕಡ 3ಕ್ಕೆ ಹೆಚ್ಚಳ ಮಾಡಲು ತೀರ್ಮಾನ ಕೈಗೊಂಡಿರುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಕಾನ್ಸ್ಟೇಬಲ್ ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇಕಡ 3ಕ್ಕೆ ಹೆಚ್ಚಿಸುವ ಜೊತೆಗೆ ಎಸ್ಸಿ, ಎಸ್ಟಿ ಮತ್ತು ಪ್ರವರ್ಗ -1ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.