ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ಜನವರಿ 9 ಅಥವಾ 16ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು. ನೂತನ ವರ್ಷಾರಂಭದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತಾದರೂ ದಿನಾಂಕ ನಿಗದಿಯಾಗಿರಲಿಲ್ಲ.
ಸಿಎಂ ಸಿದ್ದರಾಮಯ್ಯ ಅವರು ಜನವರಿ 9 ಅಥವಾ 16ರಂದು ಸಂಪುಟ ಸಭೆಗೆ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.