ಬೆಂಗಳೂರು: ಪಡಿತರ ಚೀಟಿ ಇರುವವರಿಗೆ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಎಂ.ಆರ್.ಐ. ಸ್ಕ್ಯಾನ್, ಸಿಟಿ ಸ್ಕ್ಯಾನ್ ಸೌಲಭ್ಯ ಕಲ್ಪಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬ್ರಾಂಡ್ ಬೆಂಗಳೂರು ಯೋಜನೆಯಡಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರ ಮೇಲ್ದರ್ಗೇರಿಸಲು ಅನುಮೋದನೆ ನೀಡಲಾಗಿದೆ. ಮಹಾನಗರ ಪಾಲಿಕೆ ಒಟ್ಟು 13 ಹೆರಿಗೆ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು.
10 ಮಹಾನಗರ ಪಾಲಿಕೆ, 24 ನಗರ ಪಾಲಿಕೆಗಳಲ್ಲಿ ಒಂದು ಚಿತಾಗಾರಕ್ಕೆ 4 ಕೋಟಿ ರೂಪಾಯಿ ವೆಚ್ಚದಂತೆ 126 ಕೋಟಿ ರೂ. ವೆಚ್ಚದಲ್ಲಿ ಚಿತಾಗಾರಗಳನ್ನು ನಿರ್ಮಾಣ ಮಾಡಲಾಗುವುದು.
10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
ಅಸ್ತಿತ್ವದಲ್ಲಿರುವ ಅಂಗ ಕಸಿ ಜೀವ ಸಾರ್ಥಕತೆ ಯೋಜನೆಗೆ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರಿಸಿ ಯೋಜನೆ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ.
ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ 8 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ಇನ್ಸೂರೆನ್ಸ್ ಒದಗಿಸಲು ಅನುಮೋದನೆ ನೀಡಲಾಗಿದೆ.