ಬೆಂಗಳೂರು: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
7 ವರ್ಷ ಸೇವೆ ಸಲ್ಲಿಸಿದ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಪತಿ, ಪತ್ನಿ ಪ್ರಕರಣದಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಅನುಮತಿ ನೀಡಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಸಭೆಯ ನಂತರ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ನಂಜನಗೂಡಿನಲ್ಲಿ ವಿಐಪಿ ಮತ್ತು ಭಕ್ತರ ಕೊಠಡಿಗಳ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 14.2 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.