ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ಅಧಿನಿಯಮ -2020 ಮೂಲಕ ಸುಗ್ರೀವಾಜ್ಞೆ ಜಾರಿಗೆ ತರುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಕಚೇರಿಯಿಂದ ಸಚಿವ ಸಂಪುಟ ವಿಭಾಗಕ್ಕೆ ಕಡತ ಸಲ್ಲಿಕೆಯಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ವರ್ಗಾವಣೆ ಸುಗ್ರೀವಾಜ್ಞೆ ಬಗ್ಗೆ ಚರ್ಚೆ ನಡೆಸಿ ಅನುಮೋದನೆ ಪಡೆದು ರಾಜ್ಯಪಾಲರ ಅಂಕಿತ ಪಡೆಯಲಾಗುವುದು. ಬಳಿಕ ಶಿಕ್ಷಕರ ವರ್ಗಾವಣೆ ಕಾಯ್ದೆ ಜಾರಿಗೆ ಬರಲಿದೆ ಎನ್ನಲಾಗಿದೆ.