ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ಆರಂಭವಾಗಿದೆ.
ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಹಲವು ಯೋಜನೆಗಳ ಅನುಷ್ಟಾನ ಹಾಗೂ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಸಂಬಂಧ ಸರ್ಕಾರ ಮಹತ್ವದ ಚರ್ಚೆ ನಡೆಸಲಿದೆ ಎನ್ನಲಾಗಿದೆ.