ಹುಬ್ಬಳ್ಳಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯ ಆಗಬಹುದೆಂಬ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ
ಏಪ್ರಿಲ್ 8 ರ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಲಿದೆ. ಸಂಸತ್ ಅಧಿವೇಶನ ಮುಗಿದ ನಂತರವೇ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಕುರಿತಾಗಿ ಏಪ್ರಿಲ್ 8ರ ನಂತರ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಮಾರ್ಚ್ 30 ರವರೆಗೆ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದ್ದು, ಏ. 8 ರವರೆಗೆ ಸಂಸತ್ ಅಧಿವೇಶನ ನಡೆಯಲಿದೆ. ಅಲ್ಲಿವರೆಗೆ ಸಂಪುಟ ವಿಸ್ತರಣೆಗೆ ಪ್ರಕ್ರಿಯೆ ನಡೆಯುವುದು ಅನುಮಾನ. ಆ ನಂತರವೇ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ ಮುಖ್ಯಮಂತ್ರಿಗಳು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವರಿಷ್ಠರು ಒಪ್ಪಿಗೆ ನೀಡಿದ ನಂತರ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.