ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ವೈ. ಸಂಪುಟದಲ್ಲಿದ್ದ ಸಚಿವರಿಗೆ ಬಹುತೇಕ ಹಳೆ ಖಾತೆಯಲ್ಲಿಯೇ ಮುಂದುವರೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹಳೆ ಖಾತೆ ಮುಂದುವರಿಕೆ ಬಗ್ಗೆ ಹಿರಿಯ ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾಲೋಚನೆ ನಡೆಸಿದ್ದಾರೆ. ರಾಜಭವನಕ್ಕೆ ನೂತನ ಸಚಿವರ ಖಾತೆ ಹಂಚಿಕೆಯ ಪಟ್ಟಿಯನ್ನು ರವಾನೆ ಮಾಡಲಾಗಿದ್ದು, ಬಹುತೇಕ ಇವತ್ತೇ ಖಾತೆ ಹಂಚಿಕೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.