
ಬೆಂಗಳೂರು: ನಾಳೆ ಬೆಳಗ್ಗೆ 7 ರಿಂದ 8 ಗಂಟೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು. ನಾಳೆ ಬೆಳಗ್ಗೆ 8 ಗಂಟೆಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಯಡಿಯೂರಪ್ಪ ಸಂಪುಟಕ್ಕೆ ಹೊಸದಾಗಿ 7 ಸಚಿವರು ಸೇರ್ಪಡೆಯಾಗಿದ್ದಾರೆ. ಎಲ್ಲರಿಗೂ ನಾಳೆ ಬೆಳಗ್ಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಸ್. ಅಂಗಾರ ಅವರಿಗೆ ಖಾತೆ ಹಂಚಿಕೆ ಮಾಡಲಾಗುವುದು.