ಬೆಂಗಳೂರು: ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಆದರೆ, ಸಂಪುಟ ವಿಸ್ತರಣೆ ಮಾತ್ರವಲ್ಲ, ಪುನಾರಚನೆ ಮಾಡಲಾಗುವುದು ಎನ್ನಲಾಗಿದೆ.
ರಾಜ್ಯ ಸಚಿವ ಸಂಪುಟದಿಂದ ಒಬ್ಬರನ್ನು ಕೈಬಿಡುವ ಕುರಿತಾಗಿ ಚರ್ಚೆ ನಡೆಯುತ್ತಿದೆ. 7 -8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ಒಬ್ಬ ಸಚಿವರನ್ನು ಕೈ ಬಿಡಲಾಗುವುದು. ಮೂವರು ವಲಸಿಗರು ಮತ್ತು ಐವರು ಮೂಲ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು. ಅಬಕಾರಿ ಸಚಿವ ಹೆಚ್. ನಾಗೇಶ್ ಇಲ್ಲವೇ ಬೇರೆ ಒಬ್ಬರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.