ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಲಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ 2.0 ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ನಗರ ಪ್ರದೇಶದಲ್ಲಿ ಒಂದು ಕೋಟಿ ಮನೆ ನಿರ್ಮಾಣ ಮಾಡಲಾಗುವುದು. ನಗರ ಪ್ರದೇಶಗಳ ಒಂದು ಕೋಟಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ.
ಮುಂದಿನ ಐದು ವರ್ಷಗಳಲ್ಲಿ ಒಂದು ಕೋಟಿ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ ಒಂದು ಕೋಟಿ ಕುಟುಂಬಗಳಿಗೆ ಹಣಕಾಸು ನೆರವು ನೀಡಲಿದ್ದು, ಸುಸಜ್ಜಿತ ಮನೆ ನಿರ್ಮಾಣ ಮಾಡುವವರಿಗೆ ಕೇಂದ್ರದಿಂದ ಒಂದು ಚದರ ಅಡಿಗೆ 3000 ರೂ. ನೀಡಲಾಗುತ್ತದೆ. ಇಂಟರೆಸ್ಟ್ ಸಬ್ಸಿಡಿ ಯೋಜನೆಯಲ್ಲಿ ಬಡ ಕುಟುಂಬಗಳಿಗೆ 25 ರಿಂದ 35 ಲಕ್ಷ ಸಾಲ ನೀಡಲಾಗುವುದು. 1.8 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರ 2.3 ಲಕ್ಷ ಕೋಟಿ ರೂ ವೆಚ್ಚ ಮಾಡಲಿದೆ. ಈ ಯೋಜನೆಗೆ 10 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ತೀರ್ಮಾನಿಸಲಾಗಿದೆ.