ನವದೆಹಲಿ: ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕೆಂಬುದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕರ ಜೊತೆಗೆ ಹಲವು ಹೆಸರುಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಎಲ್ಲವೂ ಕೂಡ ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ ಇದೆ. ಅವರು ಸಂಪುಟಕ್ಕೆ ಸೇರ್ಪಡೆ ಆಗುವವರ ಬಗ್ಗೆ ತೀರ್ಮಾನಿಸುತ್ತಾರೆ. ನಾಳೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಹೇಳಿದ್ದಾರೆ.