ಬೆಂಗಳೂರು: ಬೆಂಗಳೂರು ಶನಿವಾರ ಬೆಳಗ್ಗೆ 11.45ಕ್ಕೆ ನೂತನ 24 ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ. ಸರ್ಕಾರದ ಮನವಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಸಂಪುಟ ವಿಸ್ತರಣೆಗೆ ಶನಿವಾರ ಮುಹೂರ್ತ ಫಿಕ್ಸ್ ಆಗಿದೆ.
24 ಜನ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಸಮಾಲೋಚನೆಯ ಬಳಿಕ ಸಂಪುಟಕ್ಕೆ 24 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಶನಿವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.