ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಪಿಹೆಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ /ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2024-25 ನೇ ಸಾಲಿನಲ್ಲಿ ಪ್ರಥಮ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನಲ್ಲಿ ಪ್ರಾರಂಭಿಸಿರುವ (ಜ. 10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಹಾಗೂ ಕರ್ನಾಟಕ ಶಾಸನ ಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದೆ. ಅರ್ಜಿ ಸಲ್ಲಿಸಲು ಜ.20 ಕಡೆಯ ದಿನವಾಗಿರುತ್ತದೆ.
ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಒಂದು ಸೆಟ್ ಅಧಿಕೃತ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ https://www.bcwd.karnataka.gov.in , ಸಹಾಯವಾಣಿ : 8050770004 ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿ ದೂ.ಸಂ: 08182-222129 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.