alex Certify ಗಮನಿಸಿ : ಪುಸ್ತಕ ಬಹುಮಾನಕ್ಕೆ ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಪುಸ್ತಕ ಬಹುಮಾನಕ್ಕೆ ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ (01.01.2022 ರಿಂದ 31.12.2022 ಹಾಗೂ 01.01.2023 ರಿಂದ 31.12.2023ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅಥವಾ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಆಯ್ಕೆಯಾದ ಪುಸ್ತಕಕ್ಕೆ ರೂ.25 ಸಾವಿರಗಳ ಬಹುಮಾನ ಇರಲಿದೆ. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560002, ಇವರಿಗೆ ಜುಲೈ 25 ರೊಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ದೂ.080-22113146 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...