ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ವಿವಿಧ ಪಕ್ಷಗಳು ಮತದಾರರನ್ನು ಸೆಳೆಯುವ ಕಸರತ್ತು ಆರಂಭಿಸಿದೆ. ನಿಮ್ಮ ಏರಿಯಾದಲ್ಲಿ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಈ ರೀತಿಯಾಗಿ ದೂರು ಸಲ್ಲಿಸಬಹುದಾಗಿದೆ.
ಚುನಾವಣಾ ಸಂಬಂಧಿ ದೂರು ನೀಡಲು ಸಿ- ವಿಜಿಲ್ ಆ್ಯಪ್ ಇದ್ದು, ಅದರ ಮೂಲಕ ಯಾರು ಬೇಕಾದರು ದೂರು ಸಲ್ಲಿಸಿದರೆ ಆ ಕುರಿತು ತಕ್ಷಣವೇ ಚುನಾವಣಾಧಿಕಾರಿಗಳು ಕ್ರಮ ಜರುಗಿಸಲಿದ್ದಾರೆ. ದಿವ್ಯಾಂಗರ ಅನುಕೂಲಕ್ಕಾಗಿ ಸಕ್ಷಮ್ ಆ್ಯಪ್ ರೂಪಿಸಲಾಗಿದೆ. ಸಹಾಯವಾಣಿ 1950 ಗೆ ಕರೆ ಮಾಡುವ ಮೂಲಕ ಮತದಾರರು ತಮ್ಮ ದೂರು ನೀಡಬಹುದು.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಉತ್ತರಕರ್ನಾಟಕ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ . ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ.