ಬೆಂಗಳೂರು: ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಜುಲೈ 12 ರಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ.
ಬೆಂಗಳೂರಿನ ಚಾಮರಾಜಪೇಟೆ ನಾಗರೀಕರ ಒಕ್ಕೂಟ ವೇದಿಕೆ ಬಂದ್ ಗೆ ಕರೆ ನೀಡಿದ್ದು, ಶಿರ್ಸಿ ಸರ್ಕಲ್ ನಿಂದ ಈದ್ಗಾ ಮೈದಾನದವರೆಗೆ ರ್ಯಾಲಿ ನಡೆಸಲಾಗುತ್ತದೆ. ಬಂದ್ ಗೆ ವರ್ತಕರು, ವ್ಯಾಪಾರಿಗಳು ಬೆಂಬಲಿಸುವಂತೆ ಕೋರಲಾಗಿದೆ.
ವಿವಿಧ ಸಂಘ-ಸಂಸ್ಥೆಗಳು ಕೂಡ ಬಂದ್ ಗೆ ಬೆಂಬಲ ನೀಡಿವೆ. ಈದ್ಗಾ ಮೈದಾನ ವಿಚಾರದಲ್ಲಿ ಗೊಂದಲ ಮೂಡಿಸುತ್ತಿರುವುದನ್ನು ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿದೆ. ಮೈದಾನವನ್ನು ಆಟದ ಮೈದಾನವಾಗಿ ಉಳಿಸಿಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.