alex Certify ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮೆರಾ ಇರಿಸಿ 1,200 ಅರೆನಗ್ನ ಫೋಟೋ, ವಿಡಿಯೋ ತೆಗೆದ ವಿದ್ಯಾರ್ಥಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮೆರಾ ಇರಿಸಿ 1,200 ಅರೆನಗ್ನ ಫೋಟೋ, ವಿಡಿಯೋ ತೆಗೆದ ವಿದ್ಯಾರ್ಥಿ ಅರೆಸ್ಟ್

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯಗಳಲ್ಲಿ ರಹಸ್ಯವಾಗಿ ಕ್ಯಾಮೆರಾ ಅಳವಡಿಸಿ 1200 ಅರೆನಗ್ನ ಫೋಟೋ, ವಿಡಿಯೋ ತೆಗೆದ ಕಿಡಿಗೇಡಿಯನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶುಭಂ ಎಂ. ಆಜಾದ್(21) ಬಂಧಿತ ವಿದ್ಯಾರ್ಥಿಯಾಗಿದ್ದು, ಈತನ ಮೊಬೈಲ್ ಜಪ್ತಿ ಮಾಡಲಾಗಿದೆ. ಹೊಸಕೆರೆಹಳ್ಳಿಯ ರಿಂಗ್ ರಸ್ತೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಬಿಬಿಎ ಐದನೇ ಸೆಮಿಸ್ಟರ್ ನಲ್ಲಿ ಓದುತ್ತಿರುವ ಶುಭಂ ಇತ್ತೀಚೆಗೆ ಮಹಿಳೆಯರ ಶೌಚಾಲಯದಲ್ಲಿ ರಹಸ್ಯವಾಗಿ ಕ್ಯಾಮೆರಾ ಅಳವಡಿಸುವುದನ್ನು ಗಮನಿಸಿದ ವಿದ್ಯಾರ್ಥಿನಿಯರು ಚೀರಿಕೊಂಡಿದ್ದಾರೆ.

ಆಗ ತಪ್ಪಿಸಿಕೊಂಡು ಪರಾರಿಯಾಗಿದ್ದ ಶುಭಂ ವಿರುದ್ಧ ಕಾಲೇಜಿನ ಆಡಳಿತ ಮಂಡಳಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಹಿಂದೆಯೂ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ರಹಸ್ಯವಾಗಿ ಕ್ಯಾಮೆರಾ ಅಳವಡಿಸಿ ಅರೆನಗ್ನ ಫೋಟೋ, ವಿಡಿಯೋ ಚಿತ್ರೀಕರಿಸಿ ಸಿಕ್ಕಿಬಿದ್ದಿದ್ದ ಶುಭಂಗೆ ಆಡಳಿತ ಮಂಡಳಿಯವರು ಎಚ್ಚರಿಕೆ ನೀಡಿದ್ದರು. ಮುಚ್ಚಳಿಕೆ ಬರೆದುಕೊಟ್ಟಿದ್ದ ಶುಭಂ ಮತ್ತೆ ಮಹಿಳೆಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸುವಾಗ ವಿದ್ಯಾರ್ಥಿನಿಯರಿಗೆ ಸಿಕ್ಕಿಬಿದ್ದಿದ್ದಾನೆ. ಕಳೆದ ಮೂರು ವರ್ಷದಲ್ಲಿ ಸುಮಾರು 1200 ಅರೆನಗ್ನ ಫೋಟೋ, ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...