alex Certify ಶೌಚಾಲಯದಲ್ಲಿ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ವಿದ್ಯಾರ್ಥಿನಿಯರು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೌಚಾಲಯದಲ್ಲಿ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ವಿದ್ಯಾರ್ಥಿನಿಯರು ಅಮಾನತು

ಉಡುಪಿ: ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಅದನ್ನ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿದ್ದಾರೆ ಎನ್ನಲಾಗಿದ್ದು, ಇದು ಗೊತ್ತಾದ ಬಳಿಕ ಮತ್ತೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅನ್ಯಕೋಮಿನ ಅವರ ನಡುವೆ ವಾಗ್ವಾದ ನಡೆದಿದ್ದು, ಆಸ್ಪತ್ರೆಯ ಆಡಳಿತ ಮಂಡಳಿ ಮುಚ್ಚಳಿಕೆ ಬರೆಸಿಕೊಂಡು ಶಿಸ್ತು ಕ್ರಮ ಜರುಗಿಸಿದೆ. ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...