alex Certify ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ

 ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ಘಟನೆ ನಡೆದಿದೆ. ಮಂಜುನಾಥ್ ಅವರ ಪರವಾಗಿ ಪ್ರಚಾರ ನಡೆಸಿದ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಮೇಲೆ ಹಲ್ಲೆ ನಡೆಸಲಾಗಿದೆ.

ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ಜೆಡಿಎಸ್ ಬೆಂಬಲಿತ ಸದಸ್ಯರಾಗಿರುವ ಮಂಜುನಾಥ್ ಅವರ ಮೇಲೆ ಕೆಂಪನಹಳ್ಳಿ ನಿವಾಸಿ ಬೋರೇಗೌಡ ಮತ್ತು ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮಾತನಾಡಬೇಕಿದೆ ಎಂದು ಮಂಜುನಾಥ್ ನನ್ನು ಕರೆಸಿಕೊಂಡಿದ್ದ ಬೋರೇಗೌಡ ಅಂಚೆಪಾಳ್ಯದ ಬಳಿ ಬರುತ್ತಿದ್ದಂತೆ ಏಕಾಏಕಿ ಚಾಕುವಿನಿಂದ ತಿವಿದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಮಂಜುನಾಥ್ ತಲೆಗೆ ಪಟ್ಟಾಗಿದ್ದು, ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...