
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಇ- ಖಾತಾ ತಲುಪಿಸುವ ಅಭಿಯಾನವನ್ನು ಮುಂದಿನ ವಾರದಿಂದ ಆರಂಭಿಸಲಾಗುವುದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.
ನಮ್ಮ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಕರಡು ಇ-ಖಾತಾದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೆ, ನಮ್ಮ ಸಿಬ್ಬಂದಿ ಅವರ ಮನೆಗೆ ಹೋಗಿ ಅಗತ್ಯ ದಾಖಲೆಗಳನ್ನು ಪಡೆದು ಅಪ್‌ಲೋಡ್ ಮಾಡಿ ಅಂತಿಮ ಇ-ಖಾತಾ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.