alex Certify ಶಿವಮೊಗ್ಗದಲ್ಲಿ ಇಂದಿನಿಂದ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಇಂದಿನಿಂದ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಜಿಲ್ಲೆಗೆ ಆಗಮಿಸಲಿರುವ ಗೀತಾ ಶಿವರಾಜಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರಿಗೆ ಭದ್ರಾವತಿಯ ಬಾರಂದೂರು ಬಳಿ ಸ್ವಾಗತಿಸಲಾಗುವುದು. ನಂತರ ಶಿವಮೊಗ್ಗದ ಎಂ.ಆರ್.ಎಸ್. ವೃತ್ತದ ಬಳಿಯಿಂದ ಬೃಹತ್ ರ್ಯಾಲಿಯಲ್ಲಿ ಲಗನ್ ಮಂದಿರದಲ್ಲಿ ಆಯೋಜಿಸಿರುವ ಸಭೆಗೆ ಕರೆತರಲಾಗುವುದು.

ರ್ಯಾಲಿಯಲ್ಲಿ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ. ಬೆಳಗ್ಗೆ 11.30 ಕ್ಕೆ ಲಗನ ಕಲ್ಯಾಣ ಮಂದಿರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ಭರ್ಜರಿ ಪ್ರಚಾರ ನಡೆಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಗೀತಾ ಶಿವರಾಜ್ ಕುಮಾರ್ ಅವರಿಗೆ ಚಿತ್ರರಂಗದಿಂದಲೂ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ನಿರ್ಮಾಪಕರ ಸಂಘ ಬೆಂಬಲ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಚಿತ್ರರಂಗದ ಕಲಾವಿದರು ಕೂಡ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...