ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ.
ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣಾ ಪ್ರಚಾರಕ್ಕೆ ಧುಮುಕುತ್ತಿದ್ದು, ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮಂಗಳವಾರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಟು ಚನ್ನಪಟ್ಟಣಕ್ಕೆ ಆಗಮಿಸಲಿರುವ ದೇವೇಗೌಡರು ವಿವಿಧ ಸ್ಥಳಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ವಿರುಪಾಕ್ಷಿಪುರ, ಕೋಡಂಬಳ್ಳಿ, ಜೆ. ಬ್ಯಾಡರಹಳ್ಳಿ, ವೈ.ಟಿ.ಹಳ್ಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ದೇವೇಗೌಡರು ಪ್ರಚಾರ ನಡೆಸಲಿದ್ದಾರೆ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ನಿಖಿಲ್ ಪರವಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.