ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ.
ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ ನೀಡಲಾಗುವುದು. ಇಂದು ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ನಾಳೆ ಒಂದೇ ದಿನ ನಾಲ್ಕು ಕಡೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬೆಳಗ್ಗೆ 10:55 ಕ್ಕೆ ಹೋಟೆಲ್ ನಿಂದ ತೆರಳಲಿರುವ ಪ್ರಧಾನಿ ಮೋದಿ ಬೆಳಗ್ಗೆ 11 ಗಂಟೆಗೆ ಮಾಲಿನಿ ಸಿಟಿ ಮೈದಾನದ ಸಮಾವೇಶದಲ್ಲಿ ಭಾಗವಹಿಸಲಿದ್ದು, 11:45 ಕ್ಕೆ ಸಮಾವೇಶದ ಸ್ಥಳದಿಂದ ಪ್ರಯಾಣ ಬೆಳೆಸಲಿದ್ದು, 11:55 ಕ್ಕೆ ಬೆಳಗಾವಿ ಹೆಲಿಪ್ಯಾಡ್ ನಿಂದ ಶಿರಸಿಗೆ ಪ್ರಯಾಣ ಬೆಳೆಸಲಿದ್ದಾರೆ. 12:55 ಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 1 ಗಂಟೆಗೆ ಶಿರಸಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1:55 ಕ್ಕೆ ಶಿರಸಿ ಸಮಾವೇಶದ ಸ್ಥಳದಿಂದ ನಿರ್ಗಮಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಶಿರಸಿಯಿಂದ ಹೊರಟು ದಾವಣಗೆರೆಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ಹೊಸಪೇಟೆಯಲ್ಲಿ ನಡೆಯುವ ಸಮಾವೇಶದಲ್ಲಿ. ಮೇ 29ರಂದು ಬಾಗಲಕೋಟೆಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸುವರು.