ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಒಂದು ದಿನ ಮೊದಲೇ ಪ್ರಧಾನಿ ಮೋದಿ ಅವರ ಪ್ರಚಾರ ಮುಕ್ತಾಯವಾಗಿದೆ.
ರಾಜ್ಯದಲ್ಲಿ ಬಿಜೆಪಿ ಪರವಾಗಿ ಕೇಂದ್ರ ಹಾಗೂ ರಾಜ್ಯದ ಘಟಾನುಘಟಿ ನಾಯಕರು, ಸಚಿವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಇದರ ನಡುವೆ ಮೋದಿ ಭರ್ಜರಿ ಪ್ರಚಾರ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಅಲೆ ಎಬ್ಬಿಸಿದ್ದಾರೆ.
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಧಾನಸಭೆ ಚುನಾವಣೆ ಪ್ರಚಾರ ಮುಕ್ತಾಯವಾಗಿದೆ. ಏಪ್ರಿಲ್ 22 ರಿಂದ ಮೇ 7ರವರೆಗೆ ಒಟ್ಟು 7 ದಿನಗಳ ಕಾಲ ಮೋದಿ ಪ್ರಚಾರ ನಡೆಸಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಅವರು ಚುನಾವಣಾ ಪ್ರಚಾರ ಆರಂಭಿಸಿದ್ದರು. ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಪ್ರಧಾನಿಯವರ ಚುನಾವಣೆ ಪ್ರಚಾರ ಅಂತ್ಯವಾಗಿದೆ.
ಈ ಅವಧಿಯಲ್ಲಿ 18 ಸಾರ್ವಜನಿಕ ಪ್ರಚಾರ ಸಭೆ, 6 ರೋಡ್ ಶೋ ಗಳನ್ನು ಮೋದಿ ನಡೆಸಿದ್ದಾರೆ. ಹುಮ್ನಾಬಾದ್, ವಿಜಯಪುರ, ಕುಡಚಿ, ಕೋಲಾರ, ಚನ್ನಪಟ್ಟಣ, ಬೇಲೂರು, ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಮುಲ್ಕಿ, ಅಂಕೋಲ, ಬೈಲಹೊಂಗಲ, ಬಳ್ಳಾರಿ, ತುಮಕೂರು, ಬಾದಾಮಿ, ಹಾವೇರಿ, ಶಿವಮೊಗ್ಗ, ನಂಜನಗೂಡಿನಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಕಲಬುರಗಿಯಲ್ಲಿ ರೋಡ್ ಶೋ ನಡೆಸಿದ್ದಾರೆ.