ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಕುರಿತಂತೆ ಚರ್ಚೆ ನಡೆಸಲು ನಾಳೆ ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಹಾಗೂ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ನಾಳೆ ಶಿಕ್ಷಣ ತಜ್ಞರೊಂದಿಗೆ ನಡೆಯುವ ಸಭೆಯಲ್ಲಿ ರಾಜ್ಯ ಶಿಕ್ಷಣ ನೀತಿ (ಎನ್ ಇಪಿ) ರೂಪಿಸಲು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದ್ದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ಮಹತ್ವದ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಇನ್ನು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಅತಿಥಿ ಅಧ್ಯಾಪಕರ ನೇಮಕಾತಿ, ವಿದ್ಯಾರ್ಥಿಗಳ ಲ್ಯಾಪ್ ಟಾಪ್ ವಿತರಣೆ ಸೇರಿದಂತೆ ಹಲವು ಶೈಕ್ಷಣಿಕ ವಿಷಯಗಳ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.