ಬೆಂಗಳೂರು: ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ಪ್ರಾಯೋಗಿಕವಾಗಿ 10 ಜಿಲ್ಲೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಬೆಂಗಳೂರು, ಕಲಬುರಗಿ, ಮಂಡ್ಯದಲ್ಲಿ ಕ್ಯಾನ್ಸರ್ ಆಸ್ಪತ್ರೆಗಳಿದ್ದು, ದೂರದ ಜಿಲ್ಲೆಗಳಿಗೆ ರೋಗಿಗಳು ಹೋಗಿ ಬರುವುದು ತೊಂದರೆಯಾಗಿದೆ. ಹೀಗಾಗಿ ಜಿಲ್ಲಾಸ್ಪತ್ರೆಗಳಲ್ಲಿಯೇ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲಾಗುವುದು.
ಶೀಘ್ರವೇ 10 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಿದ್ದು, ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಆರಂಭಿಕ ಹಂತದಲ್ಲಿ ಬಳ್ಳಾರಿ, ಕೊಪ್ಪಳ, ಮೈಸೂರು, ರಾಯಚೂರು, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಉತ್ತರ ಕನ್ನಡ, ಮಂಗಳೂರು, ಬೆಳಗಾವಿ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಘಟಕ ತೆರೆಯಲಿದ್ದು, ಯಶಸ್ವಿಯದಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಕ್ಯಾನ್ಸರ್ ಘಟಕ ಆರಂಭಿಸಲು ಅಗತ್ಯ ವೈದ್ಯರು, ಕೊಠಡಿ, ಸಿಬ್ಬಂದಿ ಸೇರಿ ಸೌಕರ್ಯ ಕಲ್ಪಿಸಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.