ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ.
ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಲಹೆ ನೀಡಲಾಗಿದೆ. ಸುನಿಲ್ ಟೀಂ ನೀಡಿರುವ ವರದಿ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ನಾಯಕರು ಚರ್ಚೆ ನಡೆಸಿದ್ದು, ಡಿಸೆಂಬರ್ ಒಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ.
ಮೊದಲ ಹಂತದಲ್ಲಿ 150 ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ದೆಹಲಿಯ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ನಡೆದಿದ್ದ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದರು.