alex Certify ಕಳೆದ ಚುನಾವಣೆಗಿಂತ ಈ ಬಾರಿ ಕ್ರಿಮಿನಲ್‌ ಲಿಸ್ಟ್‌ನಲ್ಲಿ ಹೆಸರಿರೋ ಅಭ್ಯರ್ಥಿಗಳ ಸಂಖ್ಯೆ ಹೆಚ್ಚು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳೆದ ಚುನಾವಣೆಗಿಂತ ಈ ಬಾರಿ ಕ್ರಿಮಿನಲ್‌ ಲಿಸ್ಟ್‌ನಲ್ಲಿ ಹೆಸರಿರೋ ಅಭ್ಯರ್ಥಿಗಳ ಸಂಖ್ಯೆ ಹೆಚ್ಚು

2023 ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಕೆಲ ದಿನಗಳಷ್ಟೇ ಬಾಕಿ ಇದೆ. ಇದರ ನಡುವೆ ಎಲ್ಲ ಪಕ್ಷಗಳ ನಡುವೆ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಇದೇ ಸಮಯದಲ್ಲಿ ಬಂದ ವರದಿಯೊಂದು ಬೆಚ್ಚಿಬೀಳಿಸುವಂತಿದೆ.

ಕಳೆದ 2018 ಚುನಾವಣೆಯಿಂದ ಈ ಬಾರಿಯ ಚುನಾವಣೆಯಲ್ಲಿ ಬಹುತೇಕ ಎಲ್ಲ ಪಕ್ಷಗಳಲ್ಲಿಯೂ ಘೋಷಿತ ಅಪರಾಧ ಪ್ರಕರಣಗಳಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ 83 ಇದ್ದ ಸಂಖ್ಯೆ ಈ ಬಾರಿ 96ಕ್ಕೆ ಏರಿದೆ. ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ 59 ರಿಂದ 122 ಪ್ರಕರಣಗಳು ಮತ್ತು ಜೆಡಿಎಸ್ ಅಭ್ಯರ್ಥಿಗಳಲ್ಲಿ 41ರಿಂದ 70ಅಪರಾಧಗಳಲ್ಲಿ ಹೆಸರು ತಳಕು ಹಾಕಿಕೊಂಡಿರುವ ಅಭ್ಯರ್ಥಿಗಳಿದ್ದಾರೆ.

ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ವಿಶ್ಲೇಷಣೆ ಮತ್ತು ಅಭ್ಯರ್ಥಿಗಳ ಇತರ ವಿವರಗಳು’ ಎಂಬ ವರದಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್‌ ರಿಫಾರ್ಮ್‌ (ADR) ಬಿಡುಗಡೆ ಮಾಡಿದೆ. ಈ ವರದಿಯಲ್ಲಿ 2023ರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಅಪರಾದ ಪ್ರಕರಣಗಳು ಹೆಚ್ಚು ಎನ್ನಲಾಗಿದೆ.

ಕೊಲೆ ಸಂಬಂಧಿತ ಪ್ರಕರಣಗಳು (ಐಪಿಸಿ ಸೆಕ್ಷನ್ 302) ಘೋಷಿಸಿದ 8 ಅಭ್ಯರ್ಥಿಗಳು, ಕೊಲೆ ಯತ್ನ ಪ್ರಕರಣಗಳನ್ನು ಘೋಷಿಸಿದ 35 ಅಭ್ಯರ್ಥಿಗಳು (ಸೆಕ್ಷನ್ 307) ಮತ್ತು ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಗಳನ್ನು ಘೋಷಿಸಿದ 49 ಅಭ್ಯರ್ಥಿಗಳು ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಘೋಷಿಸಿದ ಅಭ್ಯರ್ಥಿಗಳ ಪೈಕಿ ಒಂದು ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣವಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಕ್ರಿಮಿನಲ್ ಪ್ರಕರಣಗಳಿವೆ. ಕಾಂಗ್ರೆಸ್‌ನ 55% ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದರೆ, 31% ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ. ಬಿಜೆಪಿಯಲ್ಲಿ 30% ಅಭ್ಯರ್ಥಿಗಳು ಗಂಭೀರ ಪ್ರಕರಣಗಳನ್ನು ಹೊಂದಿದ್ದರೆ, ಜೆಡಿಎಸ್‌ನಲ್ಲಿ 25% ಅಭ್ಯರ್ಥಿಗಳು ಗಂಭೀರ ಅಪರಾಧ ಪ್ರಕರಣಗಳನ್ನು ಘೋಷಿಸಿದ್ದಾರೆ.

ಕೊಲೆ, ಅತ್ಯಾಚಾರ, ಕಳ್ಳಸಾಗಣೆ, ಡಕಾಯಿತಿ ಮತ್ತು ಅಪಹರಣದಂತಹ ಘೋರ ಅಪರಾಧಗಳಿಗೆ ಶಿಕ್ಷೆಗೊಳಗಾದ ಅಭ್ಯರ್ಥಿಗಳನ್ನು ಶಾಶ್ವತವಾಗಿ ಅನರ್ಹಗೊಳಿಸಬೇಕು ಎಂದು ಎಡಿಆರ್ ಶಿಫಾರಸು ಮಾಡಿದೆ. ಗಂಭೀರ ಕ್ರಿಮಿನಲ್ ಅಪರಾಧಗಳ ಆರೋಪ ಹೊತ್ತಿರುವವರನ್ನು ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸುವಂತೆಯೂ ಅವರು ಶಿಫಾರಸು ಮಾಡಿದ್ದಾರೆ.

ವರದಿಯಲ್ಲಿ ಒಟ್ಟು ಕ್ಷೇತ್ರಗಳ ಸುಮಾರು 50% (224 ರಲ್ಲಿ 111) ರೆಡ್ ಅಲರ್ಟ್ ಕ್ಷೇತ್ರಗಳು ಎಂದು ಘೋಷಿಸಲಾಗಿದೆ. ಅಂದರೆ ಈ ಕ್ಷೇತ್ರಗಳ ಮೂರು ಅಥವಾ ಹೆಚ್ಚಿನ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದಾರೆ. 2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ, ರೆಡ್ ಅಲರ್ಟ್ ಕ್ಷೇತ್ರಗಳು ಶೇಕಡಾ 25 ರಷ್ಟು (2018ರಲ್ಲಿ 56 ಕ್ಷೇತ್ರಗಳು) ಹೆಚ್ಚಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ ಏಳು ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...