ಬೆಂಗಳೂರು: ವಿಧಾನಸಭೆ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇಂದು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ, ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕೆಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ನಾರಾಯಣಗೌಡ, ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿ. ಸೋಮಣ್ಣ, ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಾಮಪತ್ರ ಸಲ್ಲಿಸಲಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಯಶವಂತಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಟಿ. ಸೋಮಶೇಖರ್, ಮಲ್ಲೇಶ್ವರಂ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಡಾ.ಅಶ್ವತ್ತ್ ನಾರಾಯಣ್, ಪದ್ಮನಾಭನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಆರ್. ಅಶೋಕ್, ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜೆ.ಸಿ. ಮಾಧು ಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.