alex Certify ದಂಪತಿ ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಪರಸ್ಪರ ಸಮ್ಮತಿ ವಿಚ್ಛೇದನ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಂಪತಿ ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಪರಸ್ಪರ ಸಮ್ಮತಿ ವಿಚ್ಛೇದನ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ದಂಪತಿಗೆ ಪರಸ್ಪರ ಸಮ್ಮತಿಯ ವಿಚ್ಛೇದನ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

ವಿಚ್ಛೇದನ ಕೋರಿ ದಂಪತಿ ಕೋರ್ಟ್ ಮೆಟ್ಟಿಲೇರಿದ್ದರು. ಪರಸ್ಪರ ಒಪ್ಪಿಗೆಯ ವಿಚ್ಛೇದನ ನೀಡುವಂತೆ ಮನವಿ ಮಾಡಿದ್ದರು. ಆದರೆ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಒಂದೇ ಮನೆಯಲ್ಲಿ ಪತಿ, ಪತ್ನಿ ವಾಸವಾಗಿದ್ದ ಕಾರಣಕ್ಕೆ ಸಮ್ಮತಿಯ ವಿಚ್ಛೇದನ ನೀಡಲು ಕೌಟುಂಬಿಕ ನ್ಯಾಯಾಲಯ ನಿರಾಕರಿಸಿತ್ತು.

ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿ-ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವೈಮನಸ್ಯ ಹೊಂದಿದ ದಂಪತಿ ಸಾಮಾನ್ಯವಾಗಿ ಕಿತ್ತಾಡಿಕೊಳ್ಳುತ್ತಾರೆ. ವೈಮನಸ್ಯ ಇದ್ದರೂ ಒಂದೇ ಮನೆಯಲ್ಲಿರುವುದು ಅವರ ಸುಸಂಸ್ಕೃತಿ ತೋರುತ್ತದೆ. ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ವಿಚ್ಛೇದನ ನಿರಾಕರಿಸುವಂತಿಲ್ಲ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...