alex Certify BIG NEWS: ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಬೈಕ್; ಕಾಲೇಜು ವಿದ್ಯಾರ್ಥಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಬೈಕ್; ಕಾಲೇಜು ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ತಂದೆ ಹಾಗೂ ಮಗ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚುಂಚೇಗೌಡನ ಹೊಸಹಳ್ಳಿ ಬಳಿ ನಡೆದಿದೆ.

ಅಂಬಲಗೆರೆ ನಿವಾಸಿ ವರುಣ್ (18) ಮೃತ ವಿದ್ಯಾರ್ಥಿ. ವರುಣ್ ತನ್ನ ತಂದೆಯ ಜತೆಯಲ್ಲಿ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ. ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ.

ಬಸ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಗೆ ಬೈಕ್ ಗುದ್ದಿದ್ದು, ಅಪಘಾತದ ರಭಸಕ್ಕೆ ವಿದ್ಯಾರ್ಥಿ ಹಾರಿ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆಯೇ ಕ್ಯಾಂಟರ್ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...