
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆ ಜರುಗಿತು.
ಸಭೆಯಲ್ಲಿ 6 ಹೊಸ ಯೋಜನೆಗಳಿಗೆ ಹಾಗೂ ಬಂಡವಾಳ ಹೂಡಿಕೆ ಹೆಚ್ಚಳದ 8 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಅಂದಾಜು 17,836 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 27,000ಕ್ಕೂ ಅಧಿಕ ಉದ್ಯೋಗಗಳು ಸೃಷ್ಟಿಯಾಗಲಿದೆ.
ವಿಸ್ಟ್ರಾನ್ ಸೇರಿದಂತೆ ಹಲವು ಕಂಪೆನಿಗಳಿಂದ ಹೂಡಿಕೆ ಮಾಡಲಾಗುವುದು. ವಿಜಯಪುರ, ಕಲಬುರಗಿ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯಾಗಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.