ಬೆಂಗಳೂರು: ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮಗುವಿನ ಮೇಲೆಯೇ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯದಲ್ಲಿ ನಡೆದಿದೆ.
ಅಡ್ಡಾದಿಡ್ಡಿಯಾಗಿ ಕಾರು ಓಡಿಸಿಕೊಂಡು ಬಂದ ಚಾಲಕ ಮೊದಲು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಮಗು ಮೇಲೆಯೇ ಕಾರು ಹರಿಸಿದ್ದಾನೆ. ಕಾರಿನ ಚಕ್ರಕ್ಕೆ ಸಿಲುಕಿದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. 5 ವರ್ಷದ ಆರವ್ ಮೃತ ಮಗು.
ಕಾರು ಚಾಲಕ ದೇವರಾಜ್ ನನ್ನು ಜೀವನ್ ಭೀಮಾ ನಗರ ಸಂಚಾರಿ ಠಾಣೆ ಪೊಲಿಸರು ಬಂಧಿಸಿದ್ದಾರೆ.