alex Certify BIG NEWS: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನದಿಗೆ ಬಿದ್ದ ಕಾರು; ಪವಾಡ ರೀತಿಯಲ್ಲಿ ಚಾಲಕನನ್ನು ರಕ್ಷಿಸಿದ ಸ್ಥಳೀಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನದಿಗೆ ಬಿದ್ದ ಕಾರು; ಪವಾಡ ರೀತಿಯಲ್ಲಿ ಚಾಲಕನನ್ನು ರಕ್ಷಿಸಿದ ಸ್ಥಳೀಯರು

ಬೆಳಗಾವಿ: ಭಾರಿ ಮಳೆ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಕಾರು ದೂದಗಂಗಾ ನದಿಗೆ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿಯ ದಾನವಾಡ-ದತ್ತವಾಡ ಸೇತುವೆ ಬಳಿ ನಡೆದಿದೆ.

ಮಹಾರಾಷ್ಟ್ರದ ಪುಣೆಯಿಂದ ಚಿಕ್ಕೋಡಿ ತಾಲೂಕಿನ ಯಕ್ಸಾಂಬ ಪಟ್ಟಣಕ್ಕೆ ಪ್ರಯಾಣಿಕರನ್ನು ಕರೆತಂದ ಕಾರು ಚಾಲಕ, ವಾಪಸ್ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು, ಹಗ್ಗದ ಸಹಾಯದಿಂದ ಚಾಲಕನನ್ನು ರಕ್ಷಿಸಿದ್ದಾರೆ.

ಹಗ್ಗ ಬಿಟ್ಟು ಹಗ್ಗದ ಮೂಲಕ ಚಾಲಕನನ್ನು ಮೇಲಕೆತ್ತಿದ್ದು, ಬಳಿಕ ಟ್ರ್ಯಾಕ್ಟರ್ ಮೂಲಕ ಕಾರನ್ನು ನದಿಯಿಂದ ಹೊರತೆಗೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...