alex Certify ದಾರುಣ ಘಟನೆ: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವು, ಮೂವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾರುಣ ಘಟನೆ: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವು, ಮೂವರು ಗಂಭೀರ

ರಾಮನಗರ: ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವು ಕಂಡ ಘಟನೆ ರಾಮನಗರ- ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಟ್ಯೂಷನ್ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್ ವಾಹನ ಹರಿದಿದೆ. ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಕಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಒಂದನೇ ತರಗತಿಯ ರೋಹಿತ್, ಎರಡನೇ ತರಗತಿಯ ಶಾಲಿನಿ ಮೃತಪಟ್ಟ ಮಕ್ಕಳು ಎಂದು ಹೇಳಲಾಗಿದೆ. ಸುಚಿತ್, ಗೌತಮಿ, ಲೇಖನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ಮಕ್ಕಳು ರಸ್ತೆ ದಾಟುವಾಗ ವೇಗವಾಗಿ ಬಂದ ಗೂಡ್ಸ್ ವಾಹನ ಮಕ್ಕಳ ಮೇಲೆ ಹರಿದಿದೆ. ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...