alex Certify ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬ ಮೂವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬ ಮೂವರು ಸಾವು

ತುಮಕೂರು: ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರ ಗ್ರಾಮದ ಬಳಿ ಘಟನೆ ನಡೆದಿದೆ.

ನಿಯಂತ್ರಣ ಕಳೆದುಕೊಂಡ ಕಾರ್ ಕೆರೆಗೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ಮಾವ, ಅತ್ತೆ, ಪತ್ನಿ ಸಾವನ್ನಪ್ಪಿದ್ದು, ಗಂಡ ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರವೀಣ್ ಪತ್ನಿ ಯಮುನಾ, ಮಾವ ದೊಡ್ಡಣ್ಣ, ಅತ್ತೆ ಸಣ್ಣಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ.

ಮೃತರು ಶಿರಾ ತಾಲೂಕಿನ ವೀರಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಮುಂಜಾನೆ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...