ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ.
ಇಲ್ಲಿನ ಧರಿಹನುಮಾನ್ ಕ್ರಾಸ್ ನಲ್ಲಿ ಈ ಅವಘಡ ಸಂಭವಿಸಿದೆ. 47 ವರ್ಷದ ಶಿವಕುಮಾರ್ ಪೊಲೀಸ್ ಪಾಟೀಲ್ ಎಂಬುವವರು ಸಾವನ್ನಪ್ಪಿದ್ದಾರೆ.
ಔರಾದ್ ನ ಧೂಪತ್ ಮಹಾಗಾಂವ್ ನಿವಾಸಿಯಾಗಿದ್ದ ಶಿವಕುಮಾರ್, ಸಂತಪೂರ್ ನಿಂದ ತನ್ನ ಸ್ವಗ್ರಾಮಕ್ಕೆ ಕಾರಿನಲ್ಲಿ ಹೋಗುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಶಿವಕುಮಾರ್ ಸಾವನ್ನಪ್ಪಿದ್ದಾರೆ.
ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.