
ಕೋಲಾರ: ರಸ್ತೆ ಡಿವೈಡರ್ ಮೇಲೆ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಹೊರವಲಯದ ಪವನ್ ಕಾಲೇಜು ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು ಉತ್ತರ ಭಾರತ ಮೂಲದ ಕಿರಣ್ ಹಾಗೂ ರಜನಿಸಿಂಗ್ ಎಂದು ಗುರುತಿಸಲಾಗಿದೆ.
ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿಯಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.