
ಚಿತ್ರದುರ್ಗ: ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಬೊಮ್ಮಕ್ಕನಹಳ್ಳಿ ಬಳಿ ನಡೆದಿದೆ.
ಮೃತರು ಯಾದಗಿರಿ ಮೂಲದ ಮೌಲಾ(35), ರೆಹಮಾನ್(15) ಎಂದು ಗುರುತಿಸಲಾಗಿದೆ. ಫಾತಿಮಾ ಬೇಗಂ, ಸಲೀಮಾ ಬೇಗಂ ಹಾಗೂ ಸಮೀರ್ ಎಂಬುವವರು ಗಾಯಗೊಂಡಿದ್ದು, ಅವರನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಬೆಂಗಳೂರಿಂದ ಯಾದಗಿರಿಗೆ ತೆರಳುತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.