
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ರಸ್ತೆ ಬದಿಯ ಅಂಗಡಿಗೆ ನುಗ್ಗಿದ ಪರಿಣಾಮ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟಬೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಚನ್ನೈತ್ತೋಡಿ ಗ್ರಾಮದಲ್ಲಿ ನಡೆದಿದೆ.
ವಾಮದಪದವು ನಿವಾಸಿ ಸುಮತಿ ಮೃತ ಮಹಿಳೆ. ಅಪಘಾತದ ಭೀಕರ ದೃಶ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೋಭಾ ಎಂಬುವವರು ಕಾರು ಚಲಾಯಿಸುತ್ತಿದ್ದರು. ವೇಗವಾಗಿ ಬಂದ ಕಾರು ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಅಂಗಡಿಯಲ್ಲಿ ಕುಳಿತಿದ್ದ ಮಹಿಳೆ ಮೇಲೆಯೇ ಕಾರು ಹರಿದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಅಂಗಡಿ ಮುಂದೆ ನಿಂತಿದ್ದ ಡಿಕೋಸ್ತಾ ಎಂಬುವವರು ಕೂಡ ಗಾಯಗೊಂಡಿದ್ದಾರೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.