
ಚೆನ್ನೈ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಬಳಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಐವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಕಾರಿನಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಹೊರತೆಗೆಯಲ್ಲಿ ಕಾರನ್ನು ಕಟ್ ಮಾಡಿ ಹೊರತೇಗೆಯಬೇಕಾಯಿತು. ಕರೂರ್ ಗೆ ಹೋಗುತ್ತಿದ್ದ ಕಾರು ತಿರುಪ್ಪೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮೃತರು ಕೊಯಮತ್ತೂರ್ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.