
ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಕಾರ್ ತಪಾಸಣೆ ನಡೆಸಲಾಗಿದೆ ಕೋಲಾರದ ಗಡಿ ರಾಮಸಂದ್ರ ಬಳಿ ಮುಖ್ಯಮಂತ್ರಿಗಳು ತೆರಳುತ್ತಿದ್ದ ಕಾರ್ ತಪಾಸಣೆ ಮಾಡಲಾಗಿದೆ.
ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ ತಪಾಸಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಚೆಕ್ ಪೋಸ್ಟ್ ನಲ್ಲಿ ಜಿಲ್ಲಾಧಿಕಾರಿ ಆಕ್ರಮ್ ಪಾಷಾ ನೇತೃತ್ವದಲ್ಲಿ ಸಿಎಂ ಕಾರು ತಪಾಸಣೆ ಮಾಡಲಾಗಿದೆ.