
ಚಿಕ್ಕಮಗಳೂರು: ಕಾರ್ ಚಾಲಕ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜನ್ನಪುರದಲ್ಲಿ ನಡೆದಿದೆ.
ಕಾರ್ ಗೆ ಪೆಟ್ರೋಲ್ ಹಾಕಿಸುವ ವಿಚಾರವಾಗಿ ಸಿಬ್ಬಂದಿ ಜೊತೆ ಜಗಳವಾಡಿದ ಕಾರ್ ಚಾಲಕ ಕಾರ್ ನಲ್ಲಿದ್ದ ಕ್ರಿಕೆಟ್ ಬ್ಯಾಟ್ ನಿಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಪೆಟ್ರೋಲ್ ಬಂಕ್ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ದೃಶ್ಯವನ್ನು ಸ್ಥಳೀಯ ನಿವಾಸಿಗಳು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಕಾರ್ ಚಾಲಕ ಮಧು ಹುರುಡಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.