ಬೆಂಗಳೂರು: ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕೇಂದ್ರ ಕಚೇರಿಯಲ್ಲಿ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಅಧಿಕಾರಿ ಸೇರಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕೇಂದ್ರ ಕಚೇರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದರಿಂದ 59.80 ಲಕ್ಷ ರೂಪಾಯಿ ನಷ್ಟವುಂಟಾಗಿದೆ ಎಂದು ಈ ಹಿಂದಿನ ಎಸ್ ಡಿಎ ಪ್ರಶಾಂತ್ ಡಿ. ಎಸ್ ಹಾಗೂ ಸಹಾಯಕ ಆಡಳಿತಾಧಿಕಾರಿ ಸರೋಜಾ ವಿರುದ್ಧ ಸಿಎ ಆರ್ ನ ಸಹಾಯಕ ಆಡಳಿತಾಧಿಕಾರಿ ಡಿ.ರಾಜಲಕ್ಷ್ಮೀ ದೂರು ನೀಡಿದ್ದರು.
ದೂರಿನ ಅನ್ವಯ ಸಿಸಿಬಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. 2020ರಿಂದ 2022ರ ಅವಧಿಯ ನಡುವಿನ ಲೆಕ್ಕಪರಿಶೋಧನೆ ವೇಳೆ 59.80 ಲಕ್ಷ ಹಣದ ಕೊರತೆ ಕಂಡು ಬದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.