ಹಾವೇರಿ: ನಡುರಸ್ತೆಯಲ್ಲಿಯೇ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ನಡೆದಿದೆ.
ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದು ಪ್ರಾಣ ರಕ್ಷಿಸಿಕೊಂಡಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ.
ತಾಂತ್ರಿಕ ದೋಷದಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.