
ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಘಟನೆ ನಡೆದಿದೆ.
ನೈಸ್ ರಸ್ತೆಯ ಚನ್ನಸಂದ್ರ ಸೇತುವೆ ಬಳಿ ಬೆಂಕಿ ತಗುಲಿದ್ದು, ಕಾರ್ ಧಗಧಗನೆ ಹೊತ್ತಿ ಉರಿದು 40 ವರ್ಷದ ದರ್ಶನ್ ಸುಟ್ಟು ಕರಕಲಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕಾಗಿ ಅವರು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಉಂಟಾಗಿದೆ. ಸ್ಥಳೀಯರು ನೈಸ್ ರಸ್ತೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆರ್.ಆರ್. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.