
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೆದ್ದಾರಿಯ ಉಡಿಗಾಲ ಸಮೀಪ ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಗಣೇಶ್ ಅವರು ತಮ್ಮ ಕಾರ್ ನಲ್ಲಿ ಚಾಮರಾಜನಗರಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ ಮುಂಭಾಗ ಇಂಜಿನ್ ನಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಾರ್ ಗೆ ವ್ಯಾಪಿಸಿ ಹೊತ್ತಿ ಉರಿದಿದೆ. ಈ ವೇಳೆ ಕಾರ್ ನಿಂದ ಇಳಿದ ಗಣೇಶ್ ಅಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆಗಾಗಲೇ ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ.